diff --git "a/Data Collected/Kannada/MIT Manipal/Kannada-Scrapped-dta/\340\262\254\340\262\225\340\263\206\340\262\237\340\263\215_\340\262\270\340\262\265\340\262\276\340\262\260_.txt" "b/Data Collected/Kannada/MIT Manipal/Kannada-Scrapped-dta/\340\262\254\340\262\225\340\263\206\340\262\237\340\263\215_\340\262\270\340\262\265\340\262\276\340\262\260_.txt" new file mode 100644 index 0000000000000000000000000000000000000000..b6e856599d1cc0edc75ab03e5dddeefc9cfa6b2d --- /dev/null +++ "b/Data Collected/Kannada/MIT Manipal/Kannada-Scrapped-dta/\340\262\254\340\262\225\340\263\206\340\262\237\340\263\215_\340\262\270\340\262\265\340\262\276\340\262\260_.txt" @@ -0,0 +1,65 @@ +ಇದ್ದಿಲು ಎಲ್ಲವೂ ಖರ್ಚಾಗಿದೆ: +ಬಕೆಟ್ ಖಾಲಿ +ಸಲಿಕೆ ನಿಷ್ಟ್ರಯೋಜಕ: +ಒಲೆ ತಣ್ಣಗಾಗಿದೆ. +ಕೋಣೆ ತಣ್ಣಗೆ ಕೊರೆಯುತ್ತಿದೆ. +ಕಿಟಕಿಯ ಹೊರಗೆ ಮಂಜು ಮುಚ್ಚಿದ ಎಲೆಗಳು ಸ್ತಬ್ಧವಾಗಿ ನಿಂತಿವೆ; +ಆಕಾಶ ಬೆಳ್ಳಿಯ ಪರದೆಯಾಗಿದೆ. +ನನಗೆ ಇದ್ದಿಲು ಬೇಕಾಗಿದೆ . +ನಾನು ಹೆಪ್ಪುಗಟ್ಟಿ ಸಾಯಲಾರೆ. +ನನ್ನ ಹಿಂದೆ ನಿರ್ದಯಿ ಒಲೆ. +ನನ್ನ ಮುಂದೆ ನಿರ್ದಯ ಆಕಾಶ, ಅವುಗಳ ನಡುವೆ ಪ್ರಯಾಣ ಬೆಳೆಸಿ ಇದ್ದಿಲು ವ್ಯಾಪಾರಿಯ ಬಳಿಗೆ ಹೋಗಬೇಕು. +ಆದರೆ ಅವನು ಸಾಮಾನ್ಯ ಬೇಡಿಕೆಗೆ ಕಿವುಡಾಗಿದ್ದಾನೆ. +ನಾನು ಅವನಿಗೆ ಖಚಿತಪಡಿಸಬೇಕು ನನ್ನಲ್ಲಿ ಚೂರೂ ಇದ್ದಿಲು ಇಲ್ಲವೆಂದು, ಭಿಕ್ಷುಕರಂತೆ ಅವನ ಬಳಿ ಯಾಚಿಸಬೇಕು. + ಇಲ್ಲದಿದ್ದರೆ ನಿನ್ನ ಬಾಗಿಲಿನಲ್ಲಿಯೇ ಸಾಯುತ್ತೇನೆ ಎನ್ನಬೇಕು; + ಆಗ ಸಿಟ್ಟಿನಿಂದಾದರೂ ಒಂದು ಸಲಿಕೆ ತುಂಬ ಇದ್ದಿಲು ನನ್ನ ಬಕೆಟ್ಟಿನಲ್ಲಿ ಎಸೆಯುತ್ತಾನೆ. +ನನ್ನ ಪ್ರಯಾಣದ ರೀತಿಯೇ ಪರಿಸ್ಥಿತಿಯ ಗಂಭೀರತೆಯ ಅರಿವು ಮಾಡಿಕೊಡಬೇಕು; +ಅದಕ್ಕಾಗಿ ಬಕೆಟ್ಟಿನಲ್ಲಿ ಕುಳಿತು ಸವಾರಿ ಮಾಡುತ್ತೇನೆ; +ಬಕೆಟ್ಟಿನಲ್ಲಿ ಕುಳಿತು ಎರಡೂ ಕೈಗಳಿಂದ ಹ್ಯಾಂಡಲ್ ಹಿಡಿದುಕೊಳ್ಳುತ್ತೇನೆ. +ಮೆಲ್ಲ ಮೆಲ್ಲನೆ ಕಷ್ಟಪಟ್ಟು ಕುಪ್ಪಳಿಸುತ್ತ ಮೆಟ್ಟಿಲನ್ನು ಇಳಿಯುತ್ತೇನೆ ಕೆಳಗಿಳಿಯುತ್ತಲೇ ನನ್ನ ಬಕೆಟ್ ಮೇಲ ಮೇಲಕ್ಕೆ ಹೋಗುತ್ತದೆ; +ಮೇಲೇರುತ್ತ ಮಹಡಿ ಮನೆಯ ಎತ್ತರಕ್ಕೂ ಏರುತ್ತೇನೆ, ಕಡೆಗೆ ಎತ್ತರಕ್ಕೆ ತೇಲುತ್ತ ಇದ್ದಿಲು ವ್ಯಾಪರಿಯ ಮನೆಯ ಮೇಲೆ ಬಂದೆ. +ಕೆಳಗೆ, ತನ್ನ ಮನೆಯಲ್ಲಿ ಟೇಬಲ್ಲಿನ ಮುಂದೆ ಕುಳಿತು ಏನೋ ಬರೆಯುತ್ತಿದ್ದಾನೆ ವ್ಯಾಪಾರಿ; +ಬಾಗಿಲು ತೆರೆದಿದೆ ಹೆಚ್ಚಿನ ಶಾಖವನ್ನು ಹೊರಬಿಡಲು. +“ಇದ್ದಿಲು ವ್ಯಾಪಾರಿ!” ಕೂಗುತ್ತೇನೆ. +ನನ್ನ ಸ್ವರ ಹೆಪ್ಪುಗಟ್ಟಿದ ಚಳಿಯಲ್ಲಿ ಕ್ಷೀಣವಾಗಿದೆ. +“ಇದ್ದಿಲು ವ್ಯಾಪಾರಿ! ದಯವಿಟ್ಟು ನನಗಿಷ್ಟು ಇದ್ದಿಲು ಕೊಡು. +ನನ್ನ ಬಕೆಟ್ ಎಷ್ಟು ಹಗುರವಾಗಿದೆ ಎಂದರೆ ನಾನು ಅದರಲ್ಲಿ ಸವಾರಿ ಮಾಡಬಲ್ಲೆ, ದಯೆತೋರು. +ನನಗೆ ಅನುಕೂಲವಾದಾಗ ದುಡ್ಡು ಕೊಡುತ್ತೇನೆ.” +ವ್ಯಾಪಾರಿ ಕಿವಿಗೆ ಕೈಯಿಟ್ಟು ಆಲಿಸುತ್ತಾನೆ. +“ಸರಿಯಾಗಿ ಕೇಳಿಸುತ್ತಿದೆಯೇ” ತನ್ನ ಹೆಂಡತಿಯ ಕಡೆಗೆ ತಿರುಗಿ ಕೇಳುತ್ತಾನೆ. +“ಸರಿಯಾಗಿ ಕೇಳಿಸುತ್ತಿದೆಯೇ? ಗಿರಾಕಿ ಇದ್ದಂತಿದೆ.” +“ನನಗೇನೂ ಕೇಳಿಸುತ್ತಿಲ್ಲ.” ಹೆಂಡತಿ ಹೇಳುತ್ತಾಳೆ ತನ್ನ ಹೊಲಿಗೆಯನ್ನು ಮುಂದುವರೆಸುತ್ತ. +“ಹೋ! ಕೇಳಿಸಿಕೊಳ್ಳಲೇಬೇಕು.! ನಾನು … ನಿಮ್ಮ ಹಳೆಯ ಗಿರಾಕಿ… ಈಗ ಕೈ ಬರಿದಾಗಿದೆ.” +ಅದು ಯಾರೋ ಕರೆಯುತ್ತಿರುವ ಹಾಗಿದೆ. ವ್ಯಾಪಾರಿ ಹೇಳುತ್ತಾನೆ, “ನನ್ನ ಹಳೆಯ ಗಿರಾಕಿಗಳಾರೋ ಇರಬೇಕು. +ನನ್ನ ಕಿವಿಗಳು ಮೋಸಹೋಗುವುದಿಲ್ಲ.” +“ಯಾಕೆ ಸುಮ್ಮನೆ ಪೇಚಾಡುತ್ತೀರಿ?” ಹೆಂಡತಿ ಹೊಲಿಯುವುದನ್ನು ನಿಲ್ಲಿಸಿ ಹೇಳುತ್ತಾಳೆ. +“ಯಾರೂ ಇಲ್ಲ, ರಸ್ತೆ ನಿರ್ಜನವಾಗಿದೆ. +ನಮ್ಮ ಎಲ್ಲ ಗಿರಾಕಿಗಳಿಗೂ ಸಾಕಷ್ಟು ಇದ್ದಿಲು ಕೂಟ್ಟಾಗಿದೆ. +ಕೆಲವು ದಿವಸ ಅಂಗಡಿ ಮುಚ್ಚಿ ವಿಶ್ರಾಂತಿ ತೆಗೆದುಕೊಳ್ಳಬಹುದು.” +ಇಲ್ಲಿ, ಬಕೆಟ್ ಮೇಲೆ ಕುಳಿತಿದ್ದೇನೆ. +ನಾನು ಕಿರುಚುತ್ತೇನೆ. + ನನ್ನ ಕಣ್ಣು ಮಂಜಾಗುತ್ತದೆ. +“ದಯವಿಟ್ಟು ಒಂದು ಸಲ ಇಲ್ಲಿ…. ಮೇಲೆ ನೋಡಿರಿ. +ಒಂದೇ ಒಂದು ಸಲಿಕೆ ಇದ್ದಿಲು…. ದಯ ತೋರಿ…..” +“ಬಂದೆ ನಿಲ್ಲು…” ವ್ಯಾಪಾರಿ ಎದ್ದು ನಿಲ್ಲುತ್ತಾನೆ. ಅವನ ಹೆಂಡತಿ ಅವನನ್ನು ತಡೆಯುತ್ತಾಳೆ. +“ನೀವು ಇಲ್ಲೇ ಇರಿ. ನಿಮ್ಮ ಆರೋಗ್ಯ ಚೆನ್ನಾಗಿಲ್ಲ, ನಿನ್ನೆ ರಾತ್ರಿ ಎಷ್ಟು ಕಮ್ಮುತ್ತಿದ್ದಿರಿ! ಒಂದು ಸಣ್ಣ ಗಿರಾಕಿಗಾಗಿ ಈ ಕೊರೆಯುವ ಚಳಿಯಲ್ಲಿ ಹೊರಗೆ ಹೋಗಿ ಆರೋಗ್ಯ ಕೆಡಿಸಿಕೊಳ್ಳುವುದು ಬೇಡ, ಹೆಂಡತಿ, ಮಕ್ಕಳ ಬಗ್ಗೆ ಯೋಚಿಸಿ ಅದಾರೋ ನಾನು ನೋಡುತ್ತೇನೆ.” +“ಹಾಗಾದರೆ ನಮ್ಮಲ್ಲಿ ದೊರೆಯುವ ಎಲ್ಲ ವಿಧದ ಇದ್ದಿಲನ್ನು ತೋರಿಸು ಗಿರಾಕಿಗೆ ಬೆಲೆಯನ್ನು ನಾನು ಇಲ್ಲಿಂದಲೇ ಕೂಗಿ ಹೇಳುತ್ತೇನೆ.” +“ಆಗಲಿ” ಎನ್ನುತ್ತ ಆಕೆ ಹೊರಗೆ ಬರುತ್ತಾಳೆ ನನ್ನನ್ನು ನೋಡುತ್ತಾಳೆ. +“ಇದ್ದಿಲು ವ್ಯಾಪಾರಿ!” ನಾನು ಗೋಗರೆಯುತ್ತೇನೆ. + “ಒಂದೇ ಒಂದು ಸಲಿಕೆ ತುಂಬ ಇದ್ದಿಲು ಸಾಕು. + ತೀರ ಕೆಳಮಟ್ಟದ್ದಾದರೂ ಸರಿ ಬಕೆಟ್ಟಿನಲ್ಲಿ ಹಾಕಿ. + ನಾನೇ ಹೊತ್ತುಕೊಂಡು ಹೋಗುತ್ತೇನೆ. + ಪೂರ್ತಿ ದುಡ್ಡು ಕೊಡುತ್ತೇನೆ. ಈಗ ಮಾತ್ರ ಇಲ್ಲ.” +ಈಗ ಮಾತ್ರ ಇಲ್ಲ! ಎಷ್ಟು ಕರ್ಕಶವಾದ ಶಬ್ದಗಳು! +ಸಮೀಪದ ಚರ್ಚಿನ ಗಂಟೆ ಬಾರಿಸುತ್ತದೆ. +ಈ ಗಂಟೆಯ ನಾದದಲ್ಲಿ ನನ್ನ ಶಬ್ದಗಳು ಲೀನವಾಗಿ ಹೋಗುತ್ತವೆ. +“ಏನು ಬೇಕಾಗಿತ್ತಂತೆ?” ಕೂಗಿ ಕೇಳುತ್ತಾನೆ ಒಳಗಿನಿಂದ ವ್ಯಾಪಾರಿ. +“ಏನೂ ಇಲ್ಲ” ಹಿಂದೆಯೇ ಹೇಳುತ್ತಾಳೆ ಮಡದಿ ಇಲ್ಲಿ ಯಾರೂ ಇಲ್ಲ. + ನನಗೇನೂ ಕಾಣಿಸುತ್ತಿಲ್ಲ, ಕೇಳಿಸುತ್ತಿಲ್ಲ, ಚರ್ಚಿನ ಗಂಟೆ ಅಷ್ಟೇ, ಚಳಿ ವಿಪರೀತವಾಗಿದೆ. + ನಾಳೆಯಿಂದ ಅಂಗಡಿ ಮುಚ್ಚಿಬಿಡುವೆ.” +ಅವಳಿಗೆ ಏನೂ ಕಾಣಿಸುವುದಿಲ್ಲ ಏನೂ… ಕಾಣಿಸುವುದಿಲ್ಲ. +ಆದರೆ, ತನ್ನ ಏಪ್ರನ್ ಬಿಚ್ಚಿ ಝಾಡಿಸುತ್ತಾಳೆ ನನ್ನನ್ನು ಓಡಿಸಲು ನನ್ನ ಬಕೆಟ್ ತುಂಬಾ ಹಗುರವಾಗಿದೆ. +ಹೆಂಗಸಿನ ಏಪ್ರನ್ ಕೂಡ ನನ್ನ ಬಕೆಟನ್ನು ಗಾಳಿಯಲ್ಲಿ ಹಾರಿಸಬಲ್ಲುದು. +“ಏ, ದುಷ್ಟ ಹೆಂಗಸೇ,” ನಾನು ಕಿರುಚುತ್ತೇನೆ “ಏ, ದುಷ್ಟ ಹೆಂಗಸೇ! ನಾನು ಕೇವಲ ಒಂದು ಸಲಿಕೆ ತುಂಬ ಇದ್ದಿಲು ಬೇಡಿದೆ. +ತೀರ ಕೆಳಮಟ್ಟದ್ದಾದರೂ ಸರಿ ಎಂದೆ ಆದರೆ ನೀನು ಕೊಡಲಿಲ್ಲ.” +ಹಾಗೆ ಹೇಳಿ ನಾನು ಮೇಲೆ ಹಾರುತ್ತ ಹಿಮಪರ್ವತಗಳಲ್ಲಿ ಕಳೆದು ಹೋಗುತ್ತೇನೆ