diff --git "a/Data Collected/Kannada/MIT Manipal/\340\262\225\340\262\260\340\263\215\340\262\250\340\262\276\340\262\237\340\262\225_\340\262\262\340\262\277\340\262\202\340\262\227\340\262\276\340\262\257\340\262\244_\340\262\266\340\262\277\340\262\225\340\263\215\340\262\267\340\262\243__\340\262\225\340\263\206\340\262\216\340\262\262\340\263\215_\340\262\207__\340\262\270\340\263\212\340\262\270\340\263\210\340\262\237\340\262\277.txt" "b/Data Collected/Kannada/MIT Manipal/\340\262\225\340\262\260\340\263\215\340\262\250\340\262\276\340\262\237\340\262\225_\340\262\262\340\262\277\340\262\202\340\262\227\340\262\276\340\262\257\340\262\244_\340\262\266\340\262\277\340\262\225\340\263\215\340\262\267\340\262\243__\340\262\225\340\263\206\340\262\216\340\262\262\340\263\215_\340\262\207__\340\262\270\340\263\212\340\262\270\340\263\210\340\262\237\340\262\277.txt" new file mode 100644 index 0000000000000000000000000000000000000000..c368713a879c0de6742063e0071f4c5a85c7c767 --- /dev/null +++ "b/Data Collected/Kannada/MIT Manipal/\340\262\225\340\262\260\340\263\215\340\262\250\340\262\276\340\262\237\340\262\225_\340\262\262\340\262\277\340\262\202\340\262\227\340\262\276\340\262\257\340\262\244_\340\262\266\340\262\277\340\262\225\340\263\215\340\262\267\340\262\243__\340\262\225\340\263\206\340\262\216\340\262\262\340\263\215_\340\262\207__\340\262\270\340\263\212\340\262\270\340\263\210\340\262\237\340\262\277.txt" @@ -0,0 +1,24 @@ +ಕಲಾ , ವಾಣಿಜ್ಯ , ವಿಜ್ಞಾನ , ತಂತ್ರಜ್ಞಾನ , ವೈದ್ಯಕೀಯ , ದಂತ ವೈದ್ಯಕೀಯ , ನರ್ಸಿಂಗ್ , ಕಾನೂನು , ಹೋಟೆಲ್ ನಿರ್ವಹಣೆ , ವ್ಯವಸ್ಥಾಪನಾ ಅಧ್ಯಯನ , ಶಿಕ್ಷಣ ಮಹಾವಿದ್ಯಾಲಯ , ಕೃಷಿ ವಿಜ್ಞಾನ ಕೇಂದ್ರ.. ... ಹೀಗೆ ಹಲವು ಅಂಗ ಸಂಸ್ಥೆಗಳು ಕೆಎಲ್‌ಇ ಸಂಸ್ಥೆಯ ಕಿರಣದಲ್ಲಿ ಅರಳುತ್ತಿವೆ . +ಶೈಕ್ಷಣಿಕವಾಗಿ ಹಿಂದುಳಿದ ಚಿಕ್ಕೋಡಿ , ಅಥಣಿ , ಸವದತ್ತಿ , ನಿಪ್ಪಾಣಿ ಮೊದಲಾದ ಸ್ಥಳಗಳಲ್ಲಿ ಪ್ರೌಢಶಾಲೆ , ಕಾಲೇಜುಗಳನ್ನು ಸ್ಥಾಪಿಸಿದೆ . +ಬೆಳಗಾವಿಯಲ್ಲಿ ಪ್ರಭಾಕರ ಕೋರೆ ವೈದ್ಯಕೀಯ ಮತ್ತು ಸಂಶೋಧನಾ ಆಸ್ಪತ್ರೆ ನಿರ್ಮಿಸಿ ಉತ್ತರ ಕರ್ನಾಟಕದ ಜನರಿಗೆ ಅತ್ಯಾಧುನಿಕ ವೈದ್ಯಕೀಯ ಸೇವಾ ಸೌಲಭ್ಯಗಳನ್ನು ಒದಗಿಸುತ್ತಿದೆ . +ಇನ್ಫೊಸಿಸ್‌ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ಮೂರ್ತಿ , ಮಾಜಿ ಕ್ರಿಕೆಟ್‌ ಆಟಗಾರ ಸುನೀಲ್ ಜೋಶಿ , ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ , ವಿಜ್ಞಾನಿ ಡಾ.ಶಿವಾನಂದ ಪಾಟೀಲ , ವಿಧಾನಸಭೆ ವಿರೋಧಪಕ್ಷದ ನಾಯಕ ಜಗದೀಶ ಶೆಟ್ಟರ ಕೆಎಲ್‌ಇ ಸೊಸೈಟಿಯ ಹಳೆಯ ವಿದ್ಯಾರ್ಥಿಗಳಾಗಿದ್ದಾರೆ . +ಇವರೊಂದಿಗೆ ಲಕ್ಷಾಂತರ ಮಂದಿ ಇಲ್ಲಿ ಶಿಕ್ಷಣ ಪಡೆದಿದ್ದಾರೆ.ಕೆಎಲ್ಇ ರಾಜ್ಯದ ಅತಿದೊಡ್ಡ ಸಂಸ್ಥೆ . +ಉತ್ತರ ಕರ್ನಾಟಕದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಈ ಸಂಸ್ಥೆಯು ನೀಡಿರುವ ಕೊಡುಗೆ ಅಪಾರವಾದುದು . +ಅಂದಿನ ಕಾಲಕ್ಕೆ ಹೊರಗಡೆ ಹೋಗಿ ವಿದ್ಯಾಭ್ಯಾಸ ಮಾಡುವುದಕ್ಕೆ ಎಲ್ಲರಿಗೂ ಶಕ್ತಿ ಇರಲಿಲ್ಲ . +ಊರೂರಿಗೆ ಶಾಲಾ–ಕಾಲೇಜು,ಹಾಸ್ಟೆಲ್‌ಗಳನ್ನು ಸ್ಥಾಪಿಸಿ ವಿದ್ಯಾಭ್ಯಾಸಕ್ಕೆ ನೆರವಾದ ಸಂಸ್ಥೆ . +ದೂರದ ನಗರಗಳಿಗೆ ಹೋಗಿ ಓದಲು ಶಕ್ತಿ ಇಲ್ಲದವರಿಗೆ ನೆರವಾಗಿದೆ . +ಕೆಲವು ಶಿಕ್ಷಣ ಪ್ರೇಮಿಗಳು ಜನಸಾಮಾನ್ಯರಿಗೋಸ್ಕರ ದಾನ ನೀಡಿ ಕಟ್ಟಿ ಬೆಳೆಸಿದ ಸಂಸ್ಥೆ . +ಹೀಗಾಗಿ , ಕೆಎಲ್‌ಇ ಬಗ್ಗೆ ಜನರಿಗೆ ಬಹಳ ಗೌರವವಿದೆ.ಶತಮಾನೋತ್ಸವವನ್ನು ಕೇವಲ ಕಾರ್ಯಕ್ರಮಗಳಿಗೆ ಸೀಮಿತಗೊಳಿಸದೆ ಸೇವಾ ಚಟುವಟಿಕೆಗಳನ್ನು ನಡೆಸಲಾಗಿದೆ . +ವರ್ಷದಿಂದೀಚೆಗೆ ವಿವಿಧೆಡೆ 27 ಆರೋಗ್ಯ ಶಿಬಿರಗಳನ್ನು ನಡೆಸಲಾಗಿದೆ . +1,02,000 ರೋಗಿಗಳನ್ನು ತಪಾಸಣೆ ಮಾಡಲಾಗಿದೆ . +6132 ಮಂದಿಗೆ ಚಿಕಿತ್ಸೆ ನೀಡಲಾಗಿದೆ . +510 ಮಂದಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ . +ದಂತ ಚಿಕಿತ್ಸಾ ಶಿಬಿರಗಳನ್ನು ನಡೆಸಲಾಗಿದೆ . +ಸಾವಿರಾರು ಮಂದಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ.ಸಂಸ್ಥೆಯ ಮತ್ತೊಂದು ವಿಶೇಷವೆಂದರೆ , ಆಡಳಿತ ಮಂಡಳಿ ನಿರ್ದೇಶಕರನ್ನು ಪ್ರಜಾಪ್ರಭುತ್ವದ ತಳಹದಿಯಲ್ಲಿ ಅಂದರೆ ಚುನಾವಣೆ ಮೂಲಕ ಆಯ್ಕೆ ಮಾಡಲಾಗುತ್ತದೆ . +1982ರಲ್ಲಿ ಆಡಳಿತ ಮಂಡಳಿ ಪ್ರವೇಶಿಸಿದ ಪ್ರಭಾಕರ ಕೋರೆ , 1984 ರಂದೀಚೆಗೆ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಾ ಬಂದಿದ್ದಾರೆ. +ಕೆಎಲ್ಇ ಸಂಸ್ಥೆಯ ವಸ್ತುಸಂಗ್ರಹಾಲಯವು ಶತಮಾನೋತ್ಸವ ಸಂದರ್ಭದಲ್ಲಿ ಲೋಕಾರ್ಪಣೆಗೊಂಡಿದೆ . +ಬೆಳಗಾವಿ ನಗರದ ಲಿಂಗರಾಜ ಕಾಲೇಜಿನ ಆವರಣದಲ್ಲಿ ಸ್ಥಾಪಿಸಿರುವ ವಸ್ತುಸಂಗ್ರಹಾಲಯ ಸಂಸ್ಥೆಯ ಶತಮಾನದ ಭವ್ಯ ಪರಂಪರೆಯನ್ನು ಸಾರಿ ಹೇಳುತ್ತಿದೆ . +ಸಂಸ್ಥೆಯ ಸಂಸ್ಥಾಪಕರ ಕಂಚಿನ ಮೂರ್ತಿಗಳನ್ನು , ಅವರು ಉಪಯೋಗಿಸಿದ ಮೌಲಿಕ ವಸ್ತುಗಳು , ಗ್ರಂಥಗಳು ಹಾಗೂ ಇನ್ನಿತರ ದಾಖಲಾರ್ಹ ವಸ್ತುಗಳನ್ನು ಇಲ್ಲಿ ಪ್ರದರ್ಶಿಸಲಾಗಿದೆ . +ಶತಮಾನೋತ್ಸವ ಸ್ಮರಣಾರ್ಥ ಹುಬ್ಬಳ್ಳಿಯ ಕೆಎಲ್‌ಇ ಸಂಸ್ಥೆಯ ಬಿ.ವಿ .ಭೂಮರಡ್ಡಿ ತಾಂತ್ರಿಕ ಹಾಗೂ ಎಂಜಿನಿಯರಿಂಗ್‌ ಮಹಾವಿದ್ಯಾಲಯದ ಆವರಣದಲ್ಲಿ ಬಿ.ವಿ .ಭೂಮರಡ್ಡಿ ಅವರ ಪ್ರತಿಮೆ ಅನಾವರಣಗೊಳಿಸಲಾಗಿದೆ . +ಇದೇ 15ರಂದು ಬೆಳಗಾವಿಯ ಲಿಂಗರಾಜ ಕಾಲೇಜು ಉದ್ಯಾನದಲ್ಲಿ ಕಾಲೇಜಿನ ಸ್ಥಾಪನೆಯ ರೂವಾರಿ ಹಾಗೂ ಮುಂಬಯಿ ಕರ್ನಾಟಕ ಪ್ರಾಂತದ ಶಿಕ್ಷಣ ಸಚಿವರಾಗಿದ್ದ ಸರ್‌ ಸಿದ್ದಪ್ಪ ಕಂಬಳಿ ಅವರ ಪ್ರತಿಮೆ ಅನಾವರಣಗೊಳ್ಳಲಿದೆ . +‘ ಕೆಎಲ್‌ಇ ಶತಮಾನೋತ್ಸವ ಮಾಲಿಕೆ ’ ಯಲ್ಲಿ 100 ಪುಸ್ತಕಗಳನ್ನು ಬಿಡುಗಡೆ ಮಾಡಲಾಗುತ್ತಿದೆ.