ಭಾಸ್ಕರಾಚಾರ್ಯ ಎಂಬ ಭಾರತೀಯ ಗಣಿತಜ್ಞ ತನ್ನ ಲೀಲಾವತೀಯಮ್ ಎಂಬ ಗ್ರಂಥದಲ್ಲಿ ಕ್ರಮ ಸಂಯೋಜನೆಗಳನ್ನು ಕುರಿತು ಬರೆದಿದ್ದಾನೆ ( ಕ್ರಿ.ಶ .1150 ) .
ಫೇಬಿಯನ್ ಸ್ಟೆಡ್ ಮನ್ ಎಂಬ ಗಣಿತಜ್ಞ 1677ರರಲ್ಲಿ ಫ್ಯಾಕ್ಟೋರಿಯಲ್ ಕುರಿತು ಬರೆದಿದ್ದಾನೆ .
ಐದು ಅಂಕಿಗಳ ಈ ಕ್ರಮಸಂಯೋಜನೆಯನ್ನು ಪರಿಗಣಿಸಿ - 2 5 4 3 1 .
ಇದನ್ನು 1 2 3 4 5 ಎಂಬ ಕ್ರಮ ಸಂಯೋಜನೆಯ ಕೆಳಗೆ ಬರೆದಾಗ ನಮಗೆ ತಿಳಿದು ಬರುವ ಅಂಶ ಇದು - 1 ಎಂಬುದರ ಸ್ಥಾನದಲ್ಲಿ 2 ಇದೆ ; 2 ಎಂಬುದರ ಸ್ಥಾನದಲ್ಲಿ 5 ಇದೆ ; 5 ಎಂಬುದರ ಸ್ಥಾನದಲ್ಲಿ 1 ಇದೆ .
ಇವನ್ನೂ ( 1 2 5 ) ಎಂದು ಸಂಕ್ಷೇಪವಾಗಿ ಬರೆಯುತ್ತೇವೆ .
ಇದೇ ರೀತಿ 3 ಎಂಬುದರ ಸ್ಥಾನದಲ್ಲಿ 4 ಮತ್ತು 4 ಎಂಬುದರ ಸ್ಥಾನದಲ್ಲಿ 3 ಇದೆ .
ಇದನ್ನು (3 4) ಎಂದು ಸಂಕ್ಷೇಪವಾಗಿ ಬರೆಯಬಹುದು .
ಹೀಗಾಗಿ 2 5 4 3 1 ಎಂಬ ಕ್ರಮ ಸಂಯೋಜನೆಯನ್ನು ( 1 2 5 ) ( 3 4 ) ಎಂದು ನಿರೂಪಿಸಬಹುದು .
ಇದನ್ನು ಚಕ್ರ ನಿರೂಪಣೆ ಅಥವಾ ಸೈಕಲ್ ನೋಟೇಶನ್ ಎನ್ನುತ್ತಾರೆ .